ಸಾಂಸ್ಥಿಕ ರಚನೆ

ಕರ್ನಾಟಕ ರಾಜ್ಯ ದೂರ ಸಂವೇದಿ ಅನ್ವಯಿಕ ಕೇಂದ್ರವು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ, ಕರ್ನಾಟಕ ಸರ್ಕಾರ ಇದರಡಿ ಸ್ವಾಯುತ್ತ ಸಂಸ್ಥೆಯಾಗಿ ಸ್ಥಾಪನೆಗೊಂಡಿದೆ. ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಇದರ ಆಡಳಿತ ಪರಿಷತ್ತಿನ ಅಧ್ಯಕ್ಷರಾಗಿರುತ್ತಾರೆ. ಅಪರ ಮುಖ್ಯ ಕಾರ್ಯದರ್ಶಿಗಳು ಮತ್ತು ಅಭಿವೃದ್ಧಿ ಆಯುಕ್ತರು, ಕರ್ನಾಟಕ ಸರ್ಕಾರ ಇವರು ಹಾಗೂ ಪ್ರಧಾನ ಕಾರ್ಯದರ್ಶಿಗಳು, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ, ಕರ್ನಾಟಕ ಸರ್ಕಾರ ಇವರುಗಳು ಉಪಾಧ್ಯಕ್ಷರಾಗಿಯೂ ಹಾಗೂ ಎಲ್ಲಾ ಇಲಾಖೆಗಳ ಪ್ರಧಾನ ಕಾರ್ಯದರ್ಶಿಗಳು/ ಕಾರ್ಯದರ್ಶಿಗಳು ಸದಸ್ಯರಾಗಿದ್ದು ಕರ್ನಾಟಕ ರಾಜ್ಯ ದೂರ ಸಂವೇದಿ ಅನ್ವಯಿಕ ಕೇಂದ್ರದ ನಿರ್ದೇಶಕರು ಸದಸ್ಯ ಕಾರ್ಯದರ್ಶಿಗಳಾಗಿರುತ್ತಾರೆ. ಕೇಂದ್ರದ ಚಟುವಟಿಕೆಗಳು ಪ್ರಧಾನ ಕಾರ್ಯದರ್ಶಿಗಳು, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ, ಕರ್ನಾಟಕ ಸರ್ಕಾರ ಇವರ ಅಧ್ಯಕ್ಷತೆಯ ಕಾರ್ಯಕಾರಿಣಿ ಸಮಿತಿಯು ಮೇಲ್ವಿಚಾರಣೆಯಲ್ಲಿ ಕಾರ್ಯಗತಗೊಳ್ಳುತ್ತದೆ.